ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಜುಲೈ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ: 080-22374848, 7899899039 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.