ಉಡುಪಿ: ಕೆನರಾ ಬ್ಯಾಂಕ್ ಉಡುಪಿ ಇವರ ವತಿಯಿಂದ ಕೇಂದ್ರ ಸರಕಾರದ ಸಾಲ ಯೋಜನೆಗಳಾದ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿದಿ üಯೋಜನೆ, ಮುದ್ರಾ ಯೋಜನೆ ಮತ್ತು ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮವು ನವೆಂಬರ್ 8 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಾಲದ ಮಂಜೂರಾತಿ ಪತ್ರವನ್ನು ನೀಡಲಾಗುತ್ತದೆ. ಹಾಗೂ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.