ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆಯ ಸಹಯೋಗದೊಂದಿಗೆ ಅ.೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ದಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.