ಉಡುಪಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 29 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಆಯುಷ್ ನಿರ್ದೇಶನಾಲಯದ ಆಯುಕ್ತ ಶ್ರೀನಿವಾಸಲು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಅಂದು ಬೆಳಗ್ಗೆ 9 ರಿಂದ ದಿನ ನಿತ್ಯದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ವಹಿಸಬೇಕಾದ ಮುನ್ನೆಚ್ಚರಿಕೆಗಳು, ಆಹಾರ ಕ್ರಮ, ಋತುಚರ್ಯೆ, ಮಹಿಳೆಯರ ಆರೋಗ್ಯದಲ್ಲಿ ಆಯುರ್ವೇದದ ಪಾತ್ರ ಕುರಿತು ನುರಿತ ತಜ್ಞರಿಂದ ಆಯುರ್ವೇದದ ಕುರಿತು ಉಪನ್ಯಾಸ ಹಾಗೂ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.