ಉಡುಪಿ: ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ಸಮಗ್ರ ಕಣ್ಣಿನ ಆರೈಕೆಗಾಗಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ರಾಜ್ಯ ಸರಕಾರ ಜಾರಿಗೆ ತಂದಿರುವ ಮಹಾತ್ವಾಕಾಂಕ್ಷೆ ಯೋಜನೆಯಾದ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರವನ್ನು ಗುರುವಾರ ಜಿಲ್ಲೆಯ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸರಕಾರಿ ಆಸ್ಪತ್ರೆ, ಶಿರ್ವ ಹಾಗೂ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತೆರೆಯಲಾಗಿದ್ದು, ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರು ಈ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಹಾಗೂ ದೃಷ್ಠಿದೋಷವಿರುವ ಅರ್ಹ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಅವಶ್ಯಕತೆಯಿದ್ದಲ್ಲಿ ಅಂತಹವರನ್ನು ಗುರುತಿಸಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.