ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ಸಹಯೋಗದಲ್ಲಿ ಇತ್ತೀಚೆಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ, ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್

ಇವರ 130 ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷೆ ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರು.

ಹಿರಿಯ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ್ ಡಾ.ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಡಾ.ಎಸ್.ಆರ್. ರಂಗನಾಥನ್ ಇವರು ಗ್ರಂಥಾಲಯ ಚಳುವಳಿಗಾಗಿ ಹೋರಾಡಿದವರು. ಗ್ರಂಥಾಲಯ ಏಳಿಗೆಗಾಗಿ ಶ್ರಮಿಸಿ ಶ್ರೇಷ್ಠ ಜ್ಞಾನದಕೊಡುಗೆಯನ್ನು ನೀಡಿದವರು. ಗ್ರಂಥಾಲಯ ವಿಜ್ಞಾನದಲ್ಲಿ ಪಂಚಸೂತ್ರಗಳ ಬಗ್ಗೆ ಹಾಗೂ ವರ್ಗೀಕರಣ, ಸೂಚೀಕರಣವನ್ನು ಪರಿಚಯಿಸಿದವರು. ಗ್ರಂಥಾಲಯ ವಿಜ್ಞಾನಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಎಂದರು.