ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.