ಉಡುಪಿ, ನ 06: ಜಿಲ್ಲೆಯ ಕುಂದಾಪುರ ಪುರಸಭೆಯ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಕುರಿತು ಸಮೀಕ್ಷೆಯನ್ನು ಅಕ್ಟೋಬರ್ 25 ರಿಂದ ಅಕ್ಟೋಬರ್ 29 ರವರೆಗೆ ನಡೆಸಿದ್ದು, ಯಾವುದೇ ಸಾರ್ವಜನಿಕರು ಮ್ಯಾನುಯಲ್ ಸ್ಕ್ಯಾವೆಂಜರ್‍ಗಳ ಕ್ಷೇಮಾಭಿವೃದ್ದಿಗಾಗಿ ಕಾರ್ಯನಿರ್ವಹಿಸುವ ಯಾವುದೇ ಸರ್ಕಾರೇತರ ಸಂಘ-ಸಂಸ್ಥೆಗಳು, ಎನ್.ಜಿ.ಒ ಹಾಗೂ ಇತರರಿಂದ ಸಂಬಂದಿಸಿದ ಯಾವುದೇ ಅರ್ಜಿಗಳು ಸ್ವೀಕೃತವಾಗಿಲ್ಲ. ಆದ್ದರಿಂದ ಪ್ರಸ್ತುತ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಪದ್ದತಿಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳು ಹಾಗೂ ಅನೈರ್ಮಲ್ಯ  ಶೌಚಾಲಯಗಳು ಅಸ್ತಿತ್ವದಲ್ಲಿ ಕಂಡುಬಂದಿರುವುದಿಲ್ಲ.

ಈ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಸಾರ್ವಜನಿಕರು ನವೆಂಬರ್ 15 ಒಳಗಾಗಿ ಕಛೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಯಾವುದೇ ಸೂಕ್ತ ಆಕ್ಷೇಪಣೆಗಳು ಬರದಿದ್ದಲ್ಲಿ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅನೈರ್ಮಲ್ಯ ಶೌಚಾಲಯಗಳು ಯಾವುದು ಇರುವುದಿಲ್ಲವೆಂದು ಘೋಷಿಸಲಾಗುವುದು ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.