ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು (ಆರ್.ಎ.ಎಂ.ಪಿ) ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವು ಫೆಬ್ರವರಿ 27 ರಂದು ಬೆಳಗ್ಗೆ 10 ಗಂಟೆಗೆ  ನಗರದ ಕಡಿಯಾಳಿ ಜಂಕ್ಷನ್‍ನ ದಿ ಓಷನ್ ಪರ್ಲ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆಗಳ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ್, ವಿ.ಟಿ.ಪಿ.ಸಿ ಮಂಗಳೂರು ವಿಭಾಗದ ಉಪನಿರ್ದೇಶಕ ಮಂಜುನಾಥ್ ಹೆಗಡೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.