ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆಯು ಇಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ಉಡುಪಿಯ ನಿವೃತ್ತ ಡಿ.ಎಸ್.ಪಿ.ರವಿ ನಾಯ್ಕ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಪೊಲೀಸರಿಂದ ಆಕರ್ಷಕ ಕವಾಯತು ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ.ಅರುಣ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪಿ.ಎ.ಹೆಗಡೆ, ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ, ಕಾರ್ಕಳದ ಡಿಎಫ್‍ಓ ಶಿವರಾಮ್ ಬಾಬು ಹಾಗೂ ಮತ್ತಿತರರು ಉಪಸ್ಥಿತರಿದ್ದರು.