ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಮಂಗಳೂರು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್ ಜಯಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.