ಉಡುಪಿ,ನ 21:  ಮಕ್ಕಳ ದಿನಾಚರಣೆಯ ಪ್ರಯುಕ್ತ ಶುಕ್ರವಾರ ರಾಜೀವ ನಗರದ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆಯ ಕುರಿತು  ನಡೆದ ಮಾಹಿತಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ಪಿ, 1ನೇ ವ್ಲತ್ತ ಕಾರ್ಮಿಕ ನಿರೀಕ್ಷಕ ಎನ್.ಪಿ.ಎಲ್ ಸಂಜಯ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತಾ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆಯ ಕುರಿತು ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು.