ಉಡುಪಿ, ಮಾರ್ಚ್ 17: ಮೆಸ್ಕಾಂ ತಲ್ಲೂರು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 18 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08254-238182 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮ.ವಿ.ಸ.ಕಂ. ಕಚೇರಿ ಪ್ರಕಟಣ ತಿಳಿಸಿದೆ.