ಉಡುಪಿ, ಅ.10: ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ಪ್ರಥಮ ಚಿಕಿತ್ಸೆಯ ಪಾತ್ರ ದೊಡ್ಡದು. ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ರೆಡ್‍ಕ್ರಾಸ್ ರಾಜ್ಯ ಮಂಡಳಿಯ ಸದಸ್ಯ ವಿ.ಜಿ ಶೆಟ್ಟಿ ಹೇಳಿದರು.
ಅವರು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ & ಮ್ಯಾನೇಜ್‍ಮೆಂಟ್ ಕಾಲೇಜಿನ ಸಭಾಂಗಣದಲ್ಲಿ, ಭಾರತಿಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ & ಮ್ಯಾನೇಜ್‍ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ನಾರಾಯಣರಾವ್ ಸಭೆಯ ಅದ್ಯಕ್ಷತೆ ವಹಿಸಿದ್ದರು.
ರೆಡ್‍ಕ್ರಾಸ್ ಉಪಸಭಾಪತಿ ಡಾ ಅಶೋಕ್ ಕುಮಾರ್ ವೈಜಿ ಪ್ರಥಮ ಚಿಕಿತ್ಸೆಯ ಪ್ರಾಥಮಿಕ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ರೆಡ್‍ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ರೆಡ್‍ಕ್ರಾಸ್ ಖಜಾಂಚಿ ರಮಾದೇವಿ, ತ್ರಿಶಾ ಕಾಲೇಜಿನ ರೆಡ್‍ಕ್ರಾಸ್ ಸಂಯೋಜಕಿ ಚೇತನ ಸುನಿಲ್, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಥಮ ಚಿಕಿತ್ಸಾ ತರಬೇತುದಾರರಾಗಿ ಅಶ್ವಿನ್ ಕುಮಾರ್ ಮತ್ತು ನೇತ್ರಾವತಿ ಪ್ರಾಯೋಗಿಕ ತರಬೇತಿ ನೀಡಿದರು. ವಿದ್ಯಾರ್ಥಿನಿ ಸ್ನೇಹಭಟ್ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ವಿವಿಧ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.