ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಕನ್ನಡ ವಿಭಾಗ ಇವರ ಸಹಯೋಗದೊಂದಿಗೆ ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವು ಮಾರ್ಚ್ 12 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎ.ವಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವಕರ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ. ನಿರಂಜನ ಯು.ಸಿ ಉಪನ್ಯಾಸ ನೀಡಲಿದ್ದಾರೆ.