ಉಡುಪಿ: ಉಡುಪಿ ನಗರಸಭಾ ಗಣರಾಜ್ಯೋತ್ಸವ ಕ್ರೀಡಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತ್ತು ಅಧಿಕಾರಿ/ಸಿಬ್ಬಂಧಿಗಳಿಗೆ ಮತ್ತು ಜಿಲ್ಲಾ ಪತ್ರಕರ್ತರಿಗೆ ಗಣರಾಜ್ಯೋತ್ಸವ ಕ್ರೀಡಾಕೂಟವು ಜನವರಿ 25 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. 

ಉಡುಪಿ ಶಾಸಕ ಯಶ್‍ಪಾಲ್ ಎ. ಸುವರ್ಣ ಕ್ರೀಡಾಕೂಟ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಿಲ್ಲಾ ಕೊರಗ ಸಮುದಾಯದವರಿಗೆ, ಉಡುಪಿ ನಗರಸಭಾ ಸದಸ್ಯರು ಮತ್ತು ಪತ್ರಕರ್ತರಿಗೆ ಕ್ರಿಕೆಟ್ ಪಂದ್ಯಾಟ ಮತ್ತು ಬ್ಯಾಡ್ಮಿಂಟನ್ ಪಂದ್ಯಾಟವನ್ನು ಈಗಾಗಲೇ ನಡೆಸಲಾಗಿದ್ದು, ಜ. 25 ರಂದು ನಡೆಯುವ ಗಣರಾಜ್ಯೋತ್ಸವ ಕ್ರೀಡಾ ಕೂಟದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿ/ಸಿಬ್ಬಂಧಿಗಳಿಗೆ ಶಾಟ್‍ಪುಟ್, 100 ಮೀ., 200 ಮೀ. ಹಾಗೂ 400 ಮೀ. ಓಟ, ಹಗ್ಗಜಗ್ಗಾಟ, ವಾಲಿಬಾಲ್ ಮತ್ತು ತ್ರೋಬಾಲ್ ಮತ್ತು ಪತ್ರಕರ್ತರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ ಜರಗಲಿದೆ ಎಂದು ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಕಾರ್ಯಾಧ್ಯಕ್ಷ ಕಿರಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.