ಉಡುಪಿ: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಭಾಷೆ ಸಂಸ್ಕೃತವನ್ನು ಅಧ್ಯಯನ ಮಾಡುತ್ತಿರುವ 27 ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಮಂಜೂರಾಗಿರುವ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾ ಭಾರತಿ ಉಡುಪಿ ಇದರ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ, ವಿಭಾಗಿಯ ಸಂಯೋಜಕ ಪ್ರಸನ್ನ ಶಣೈ, ಪ್ರಾಂಶುಪಾಲ ಜಗದೀಶ್ ಕುಮಾರ್ ಎಸ್ ಡಿ ಎಂ ಸಿ ಗೌರವಾಧ್ಯಕ್ಷೆ ತಾರಾದೇವಿ, ಮುಖ್ಯ ಶಿಕ್ಷಕಿ ಇಂದಿರಾ ಬಿ ಉಪಸ್ಥಿತರಿದ್ದು ಚೆಕ್ ಗಳನ್ನು ವಿತರಿಸಿ ಶುಭ ಹಾರೈಸಿದರು.