ಉಡುಪಿ, ಸೆ. 24: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಸೆ. 22 ರಿಂದ ಅಕ್ಟೋಬರ್ 7 ರ ವರೆಗೆ ನಡೆಯಲಿದ್ದು, ಸದರಿ ಸಮೀಕ್ಷೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಹೆಲ್ಪ್‍ಲೈನ್ ಪ್ರಾರಂಭಿಸಲಾಗಿದೆ.
ರಾಜ್ಯಮಟ್ಟದ ಸಹಾಯವಾಣಿ ಸಂಖ್ಯೆ: 8050770004, ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ: 0820-2574881 ಹಾಗೂ ತಾಲೂಕು ಮಟ್ಟದಲ್ಲಿ ಉಡುಪಿ, ಬ್ರಹ್ಮಾವರ ಹಾಗೂ ಕಾಪು ತಾಲೂಕಿಗೆ ಸಂಬಂಧಿಸಿದಂತೆ ಉಡುಪಿಯ ತಾಲೂಕು ಪಂಚಾಯತ್ ಆವರಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ: 0820-2520739, ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಸಂಬಂಧಿಸಿದಂತೆ ಕುಂದಾಪುರ ಟೌನ್ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ: 9972294198, ಕಾರ್ಕಳ ಹಾಗೂ ಹೆಬ್ರಿ ತಾಲೂಕಿಗೆ ಸಂಬಂಧಿಸಿದಂತೆ ಕಾರ್ಕಳ ಕೆ.ಇ.ಬಿ ಬಳಿಯ ಶ್ರೀ ಡಿ ದೇವರಾಜ ಅರಸು ಭವನ ದೂ. ಸಂಖ್ಯೆ: 08258-298610 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.