ಉಡುಪಿ, ಡಿ 12: ಬಡಾನಿಡಿಯೂರು ಗ್ರಾಮ ಪಂಚಾಯತ್‍ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಸಕ್ತ ಸಾಲಿನ ಪ್ರಥಮ ಹಂತ ಹಾಗೂ 2023-24 ನೇ ಸಾಲಿನ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಬಗ್ಗೆ ವಿಶೇಷ ಗ್ರಾಮ ಸಭೆಯು ಡಿಸೆಂಬರ್ 16 ರಂದು ಬೆಳಗ್ಗೆ 10.30 ಕ್ಕೆ ಬಡಾನಿಡಿಯೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.