ಉಡುಪಿ:  ತತ್ವಪದ ಸಾಹಿತ್ಯ, ಭಕ್ತಿ ಸಾಹಿತ್ಯ, ಕೀರ್ತನಾ ಸಾಹಿತ್ಯ ಕುರಿತಂತೆ ಅಧ್ಯಯನ ವ್ಯಾಪ್ತಿ ಹೊಂದಿರುವ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್- ಕೃಷ್ಣಾಪುರದೊಡ್ಡಿ ಇವರ ಸಹಯೋಗದಲ್ಲಿ ಪ್ರಸ್ತುತ ಈ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡುತ್ತಿರುವ ಯುವ ಸಂಶೋಧನಾರ್ಥಿಗಳಿಗೆ ಮಾರ್ಚ್ 10 ಮತ್ತು 11 ರಂದು ರಾಮನಗರ ಜಿಲ್ಲೆಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬ ಇಲ್ಲಿ ಅಧ್ಯಯನ ಕಮ್ಮಟವನ್ನು ನಡೆಸಲು ಉದ್ದೇಶಿಸಿದ್ದು, ಆಸಕ್ತ 20 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವೆಬ್‍ಸೈಟ್ https://kanakadasaresearchcenter.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.