ಉಡುಪಿ ತಾಲೂಕು ಪಂಚಾಯಿತಿನ 5 ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯು ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತೆರೆಯಲಾದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.