ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಆಗಸ್ಟ್ 22 ರಿಂದ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರೆ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಶಿವಮೊಗ್ಗದ ಕೆ.ಇ.ಬಿ ವೃತ್ತದ ಸರ್ಕಾರಿ ನೌಕರರ ನೂತನ ಸಮುದಾಯ ಭವನದಲ್ಲಿ ವ್ಯವಸ್ಥೆಯನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
