ಉಡುಪಿ: ಕರ್ನಾಟಕ ಸರ್ಕಾರದ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್ ಅವರು ಏಪ್ರಿಲ್ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಮಧ್ಯಾಹ್ನ 1 ಗಂಟೆಗೆ ಉಡುಪಿಯ ಸಕ್ರ್ಯೂಟ್ ಹೌಸ್‍ಗೆ ಆಗಮಿಸುವ ಅವರು, ಮಧ್ಯಾಹ್ನ 2.15 ಕ್ಕೆ ನಗರದ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ, 3.30 ಕ್ಕೆ ಕಾಪುವಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ 4.30 ಕ್ಕೆ ಕಾಪುವಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.