ಉಡುಪಿ: ಉಡುಪಿ ತಾಲೂಕು ಅಂಜಾರು ಗ್ರಾಮದ ಸ.ನಂ.159/1 ರಲ್ಲಿ 3.50 ಎಕ್ರೆ, 159/2 ರಲ್ಲಿ 0.75 ಎಕ್ರೆ, 160/1 ರಲ್ಲಿ 0.75 ಎಕ್ರೆ ಸೇರಿದಂತೆ ಒಟ್ಟು 5.00 ಎಕ್ರೆ ಸ್ಥಳವನ್ನು ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರೆ ನಿರ್ಮಾಣ ಉದ್ದೇಶಕ್ಕಾಗಿ ಬೆಂಗಳೂರು ಕಾರ್ಮಿಕ ಕಲ್ಯಾಣ ಮಂಡಳಿ ಹೆಸರಿಗೆ ಕಾಯ್ದಿರಿಸಿದ ಸ್ಥಳದಲ್ಲಿರುವ ಅಕೇಶಿಯಾ, ಮ್ಯಾಂಜಿಯಂ, ಗಾಳಿ ಜಾತಿಯ ಒಟ್ಟು 197 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.