ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್https://www.kaushalkar.com/ನಲ್ಲಿ ಆನ್ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22865522, 9900012351 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.