ಉಡುಪಿ: ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರವು ಆಗಸ್ಟ್ 14 ರಂದು ಮಧ್ಯಾಹ್ನ 2.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಜೀತೇಂದ್ರ ಕುಮಾರ್ ದಯಾಮ, ಬೆಂಗಳೂರು ಮೀನುಗಾರಿಕಾ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.