ಉಡುಪಿ, ನ. 30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ವಿದ್ಯಾರತ್ನ ಸ್ಕೂಲ್ & ಕಾಲೇಜು ಆಫ್ ನರ್ಸಿಂಗ್ ಉಡುಪಿ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‍ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‍ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿ ಸೌಧ ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 2 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಪ್ರಗತಿಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ಆರೋಗ್ಯ ಮತ್ತು ಕು.ಕ ಸೇವೆಗಳ ನಿರ್ದೇಶನಾಲಯದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಎಸ್.ಕೆ.ಆರ್.ಡಿ.ಪಿ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ವಿಶ್ವ ಏಡ್ಸ್ ದಿನ ಅಂಗವಾಗಿ ಅಂದು ಬೆಳಗ್ಗೆ 9 ಗಂಟೆಗೆ ಬೋರ್ಡ್ ಹೈಸ್ಕೂಲ್‍ನಿಂದ ಕೆ.ಎಂ ಮಾರ್ಗವಾಗಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಸಭಾಂಗಣದವರೆಗೆ ನಡೆಯುವ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್ ಯೋಗೇಶ್ ಚಾಲನೆ ನೀಡಲಿದ್ದಾರೆ.