ಉಡುಪಿ, ನವೆಂಬರ್ 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ & ಕಾಲೇಜ್ ಆಫ್ ನರ್ಸಿಂಗ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‍ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಏಡ್ಸ್ ದಿನ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 1 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಿನಿ ಟೌನ್ ಹಾಲ್‍ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ವಿದ್ಯಾರತ್ನ ಸ್ಕೂಲ್ & ಕಾಲೇಜ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲೆ ಡಾ.ಅನಿತಾ ಸಿ ರಾವ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೋರ್ಡ್ ಹೈಸ್ಕೂಲ್‍ನಿಂದ ಕೆ.ಎಂ ಮಾರ್ಗವಾಗಿ ಮಿನಿ ಟೌನ್ ಹಾಲ್‍ವರೆಗೆ ನಡೆಯುವ ಜಾಥಾ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 9.15 ಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಉದ್ಘಾಟಿಸಲಿರುವರು.