ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಆಶಾ ನಿಲಯ, ವಿಶೇಷ ಶಾಲೆ ಉಡುಪಿ ಮತ್ತು ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಉಡುಪಿ ತಾಲೂಕು ಇವರ ಸಹಯೋಗದೊಂದಿಗೆ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 29 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಿಷನ್ ಕಂಪಂಡ್ ಆಶಾ ನಿಲಯ ವಿಶೇಷ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಭಾಯಲ್ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಆಶಾ ನಿಲಯ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಾ ಅಮ್ಮನ್ನ, ಸಂಪನ್ಮೂಲ ವ್ಯಕ್ತಿಗಳಾಗಿ ಮಾನಸಿಕ ತಜ್ಞ ವಿರೂಪಾಕ್ಷ ದೇವರಮನೆ, ಡಿಡಿಆರ್‍ಸಿಯ ಸದಸ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿಯವರು ಉಪಸ್ಥಿತರಿರುವರು.