ಉಡುಪಿ, ನವೆಂಬರ್ 30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ(ರಿ), ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು, ವಿಕಲ ಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ವಿಕಲ ಚೇತನರ ದಿನಾಚರಣೆಯು ಡಿಸೆಂಬರ್ 3 ರಂದು ಬೆಳಗ್ಗೆ 10.30 ಕ್ಕೆ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್‍ಕುಮಾರ್, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವ ಹಾಲಪ್ಪ ಬಸಪ್ಪ ಆಚಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್‍ಎಸ್ ಕಲ್ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್‍ಹಾಗೂ ಮತ್ತಿತರರು ಭಾಗವಹಿಸಲಿರುವರು.
ಅಂದು ಬೆಳಗ್ಗೆ 9ಗಂಟೆಗೆ 21 ವಿವಿಧ ರೀತಿಯ ಅಂಗವಿಕಲತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಹಾಗೂ ಪೋಷಕರನ್ನೊಳಗೊಂಡ ಜಾಥಾ, ನಂತರ ಸಭಾ ಕಾರ್ಯಕ್ರಮ ಹಾಗೂ ಅಂಗವಿಕಲತೆಗೆ ಕಾರಣಗಳು-ಅಂಗವಿಕಲ ವ್ಯಕ್ತಿಗಳ ಪುನರ್ವಸತಿಗೆಇರುವ ಇಲಾಖಾ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಮತ್ತು ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕುರಿತು ಸಂದೇಶ ಸಾರುವ“ವಿಜಯಚೇತನ”ಯಕ್ಷಗಾನ ಪ್ರಸಂಗ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.