ಉಡುಪಿ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಕಾರ್ಯಕ್ರಮವು ಮೇ 17 ರಂದು ಬೆಳಗ್ಗೆ 11 ಘಂಟೆಗೆ ನಗರದ ಬ್ರಹ್ಮಗಿರಿಯ ರೆಡ್‍ಕ್ರಾಸ್ ಭವನದ ಜೀನ್ ಹೆನ್ರಿ ಡ್ಯುನಾಂಟ್ ಹಾಲ್‍ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ರಾಜ್ಯರೆಡ್‍ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಫಲಾನುಭವಿಗಳಿಗೆ ಸಾಧನ ಸಲಕರಣೆ ಮತ್ತು ಶಾಲಾ ಕಾಲೇಜುಗಳಿಗೆ ಚಿಕಿತ್ಸಾ ಕಿಟ್‍ಗಳನ್ನು ವಿತರಿಸಲಿದ್ದಾರೆ. ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‍ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಎಂ.ಎಸ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.