ಉಡುಪಿ, ಜನವರಿ 22: ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ  ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಡಿಜಿಟಲ್ ವಹಿವಾಟು ಬಗ್ಗೆ ತರಬೇತಿ ಕಾರ್ಯಕ್ರಮವು ಗುರುವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ನಡೆಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ರುದ್ರೇಶ್ ಕಾರ್ಯಕ್ರಮ ಉದ್ಘಾಟಿಸಿ, ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಡಿಜಿಟಲ್ ವಹಿವಾಟು ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಅನುಸೂಯ ಆನಂದರಾಮ ಹೇರ್ಳೆ, ಮುಖ್ಯಾಧಿಕಾರಿ ಬಿ ಅರುಣ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿಯ ಅಭಿಯಾನ ವ್ಯವಸ್ಥಾಪಕ ರಾಮಕೃಷ್ಣ ಉಪಸ್ಥಿತರಿದ್ದರು.