ಉಜಿರೆ: ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೋಮವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಒಂದು ಸಾವಿರ ಕೆರೆಗಳ ಪುನಶ್ಚೇತನ ಹಾಗೂ ಸಂಸದರ  ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆ ಅಭಿವೃದ್ಧಿಗೆ ಹೆಗ್ಗಡೆಯವರು ನೀಡಿದ ನೆರವಿನ ಬಗ್ಯೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿ ಹೆಗ್ಗಡೆಯವರನ್ನು ಅಭಿನಂದಿಸಿದರು.

ಕಾಡುಪ್ರಾಣಿಗಳು ನಾಡಿಗೆ ಬಂದು ಕೃಷಿಗೆ ಹಾನಿ ಮಾಡುವುದನ್ನು ತಡೆಯಲು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಹೆಗ್ಗಡೆಯವರು ಪ್ರಾರಂಭಿಸಿದ ಅರಣ್ಯ ಪ್ರದೇಶದಲ್ಲಿ  ಹಣ್ಣಿನ ಗಿಡಗಳನ್ನು ನೆಡುವ ಯೋಜನೆ ಬಗ್ಯೆಯೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ನಿ ಗೀತಾ ಖಂಡ್ರೆ, ಮಗ ಬೀದರ್ ಸಂಸದ ಸಾಗರ್ ಖಂಡ್ರೆ ಮತ್ತು ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಮತಾ ಗಟ್ಟಿ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳು ಜೊತೆಗಿದ್ದರು.

ಬಳಿಕ ಸಚಿವರು ದೇವರ ದರ್ಶನ ಮಾಡಿ ವಿಶೆಷ ಪೂಜೆ ಸಲ್ಲಿಸಿದರು. ಭೋಜನದ ಬಳಿಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.