ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಇನ್ನಷ್ಟು ಸಾಹಿತ್ಯದ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಒಂದು ಮಾದರಿ ಜಿಲ್ಲೆಯನ್ನಾಗಿ ಮಾಡುವ ಬಗ್ಗೆ ಎಲ್ಲರ ಸಹಕಾರವನ್ನು ಕೋರಿದರು. ಹಿರಿಯ ಸಾಹಿತಿಗಳ ಅನುಭವ ನಮ್ಮ ಯುವಜನತೆ ಮತ್ತು ವಿದ್ಯಾರ್ಥಿಗಳಿಗೆ ಸಿಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸುವುದು ಎಂಬ ಅಭಿಪ್ರಾಯವನ್ನು ಮಾನ್ಯ ಅಧ್ಯಕ್ಷರು ವ್ಯಕ್ತಪಡಿಸಿದರು.
ಹಿರಿಯ ಯಕ್ಷಗಾನ ಸ್ತ್ರೀ ವೇಷದಾರಿ ಪಾತಾಳ ವೆಂಕಟರಮಣ ಭಟ್ಟ ಅವರ ನಿಧನಕ್ಕೆ ಇದೇ ಸಂದರ್ಭದಲ್ಲಿ ನುಡಿನಮನ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಧ್ಯಕ್ಷರಾದ ಬಿ.ಐತ್ತಪ್ಪ ನಾಯ್ಕ್ ಮಾತನಾಡಿ 5 ದಶಕಗಳಿಗಿಂತಲೂ ಹೆಚ್ಚುಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮೂಲಕ ದೊಡ್ಡ ಕೊಡುಗೆ ನೀಡಿದ್ದಾರೆ. ತೆಂಕು ಮತ್ತು ಬಡಗು ಎರಡು ತಿಟ್ಟಿನಲ್ಲಿ ಸೈ ಎನಿಸಿಕೊಂಡಿದ್ದಾರೆ ಯಕ್ಷಗಾನ ಕ್ಷೇತ್ರದ ಧ್ರುವತಾರೆ ಎಂಬುದಾಗಿ ಅವರ ಸಾಧನೆಯನ್ನು ಕೊಂಡಾಡಿದರು. ಪುತ್ತೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ ನಾಯಕ್ ಅವರು ಮಾತಾನಾಡಿ ಪಾತಾಳ ವೆಂಕಟರಮಣ ಭಟ್ಟ ಅವರ ಹಾಸ್ಯ ಪ್ರಜ್ಞೆಯನ್ನು ನೆನಪಿಸಿದರು.
ಸಭೆಯ ಆರಂಭದಲ್ಲಿ ದ.ಕ.ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಹೆಚ್ ಸ್ವಾಗತಿಸಿದರು, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ .ಕೆ ವಂದಿಸಿದರು.