ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ ಆ. 19ರಂದು ಮಂಗಳವಾರ ಪೂರ್ವಾಹ್ನ ಹನ್ನೊಂದು ಗಂಟೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ ಜೈನ್ ತಿಳಿಸಿದ್ದಾರೆ.
ಚಲನಚಿತ್ರ ನಟ ದತ್ತಣ್ಣ ಪುರಸ್ಕಾರ ಪ್ರದಾನ ಮಾಡುವರು.
ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ “ಜ್ಞಾನಪಥ ಮತ್ತು ಜ್ಞಾನರಥ” ಎಂಬ ಎರಡು ಕೃತಿಗಳನ್ನು ಬಿಡುಗಡೆಗೊಳಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.