ಕೇಂದ್ರ ಸರಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಮಂಗಳವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಯಿತು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅದಕ್ಕೆ ಅಂಕಿತ ಮುದ್ರೆ ಒತ್ತಿದರು. ರಾಜ್ಯದ ರಾಜ್ಯಪಾಲರಾಗಿದ್ದ ವಜುಭಾಯಿವಾಲಾ ಅವರ ಅಧಿಕಾರಾವಧಿ ಮುಗಿದುಹೋಗಿದೆ.
ಮಧ್ಯ ಪ್ರದೇಶದ ನಾಗ್ಡಾದವರಾದ ತಾವರ್‌ಚಂದ್ ಗೆಹ್ಲೋಟ್ ಅವರು ಮೂರು ಬಾರಿ ಶಾಸಕರಾಗಿ, ನಾಲ್ಕು ಬಾರಿ ಸಂಸದರಾಗಿ ಆಯ್ಕೆ ಆದವರು. ಸದ್ಯ ರಾಜ್ಯಸಭೆಯ ಸದಸ್ಯರಾಗಿದ್ದು, ಅಲ್ಲಿ ಬಿಜೆಪಿ ಪಕ್ಷದ ನಾಯಕರಾಗಿದ್ದರು.