ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ರವರು ಇಂದು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಸಹಾಯ ಹಸ್ತ ಕುರಿತಾಗಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ನಾಯಕರ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜಾ, ಪಿ.ವಿ.ಮೋಹನ್, ಮಾಜಿ ಶಾಸಕರಾದ ವಸಂತ್ ಬಂಗೇರ, ಮೊಯ್ದೀನ್ ಬಾವಾ, ಜೆ.ಆರ್.ಲೋಬೋ, 2019ರ ಲೋಕಸಭಾ ಅಭ್ಯರ್ಥಿ ಮಿಥುನ್ ರೈ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೊ, ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಸವಾದ್ ಸುಳ್ಯ ಸೇರಿದಂತೆ ಇನ್ನಿತರ ಮುಂಚೂಣಿ ಘಟಕಗಳ ಜಿಲ್ಲಾಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಕಾರ್ಪೊರೇಟರ್ ಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.