ಮಹಿಳೆಯರ ಅಭಿವೃದ್ಧಿ ಬೇಕು, ಆದರೆ ಅದಕ್ಕಿಂತ ಮುಖ್ಯವಾಗಿ ಮಹಿಳೆಯರ ಮುಖಂಡತ್ವದಲ್ಲಿ ಅಭಿವೃದ್ಧಿಯ ಗುರಿಯನ್ನು ಹೊಂದಿರಬೇಕು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದರು.

ಎನ್‌ಎಎಲ್‌‌ಎಸ್‌ಎ- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ನಡೆಸುವ ಆರು ವಾರಗಳ ಭಾರತದಲ್ಲಿ ಕಾನೂನು ಅರಿವು ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ರಾಷ್ಟ್ರಪತಿಗಳು ಮಾತನಾಡಿದರು.

ಕಾನೂನು ಪ್ರಾಧಿಕಾರಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಬೇಕು. ಆಗ ಜನರ ಮನೆ ಬಾಗಿಲಿಗೆ ನ್ಯಾಯ ಮುಟ್ಟಿಸಲು ಸುಲಭ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಎನ್. ವಿ. ರಮಣ, ಅಡ್ವೊಕೇಟ್ ಜನರಲ್ ಕೆ. ಕೆ. ವೇಣುಗೋಪಾಲ್ ಉಪಸ್ಥಿತರಿದ್ದರು.