ಉಜಿರೆ: ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಮತ್ತು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೋಮವಾರ ಬೆಳಿಗ್ಯೆ ಹತ್ತು ಗಂಟೆಯಿಂದ ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನೋತ್ಸವದ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಕೆ.ಎನ್. ಮತ್ತು ಕಾರ್ಯಕ್ರಮ ಸಂಯೋಜಕ ಪ್ರೊ. ರಾಜಶೇಖರ ಹಳೆಮನೆ ತಿಳಿಸಿದ್ದಾರೆ.

ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಿಶೇಷ ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸುವರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಮತ್ತು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಶುಭಾಶಂಸನೆ ಮಾಡುವರು.

ಎಸ್.ಡಿ.ಎಂ. ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನಾಗಿ ಕಥನ ಕವನರೂಪಕ ಪ್ರದರ್ಶನ ಮತ್ತು ನಾದಮಣಿ ನಾಲ್ಕೂರು ಕಲಾವಿದರಿಂದ ಕುವೆಂಪು ಹಾಡುಗಳ ಗಾಯನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ 2025ರ ಜನವರಿ 4 ಮತ್ತು 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.