ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಯಕ್ಷಕಲಾ ಕೇಂದ್ರ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾl ಮಾಲಿನಿ ಕೆ ಐಕ್ಯೂಎಸಿ ಸಂಯೋಜಕರು ಮತ್ತು ಮುಖ್ಯಸ್ಥರು ವಿಜ್ಞಾನ ವಿಭಾಗ ರಂಗಭೂಮಿಯಲ್ಲಿ ಸೃಜನಶೀಲತೆ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ರಂಗಭೂಮಿಯು 

ನಿರಂತರತೆಯನ್ನು ಹೊಂದಿ ಹೊಸ ಸ್ವರೂಪಗಳಿಗೆ ತೆರೆದಿರಬೇಕಾದ ಅಗತ್ಯತೆಯ ಅವರು ಬಗ್ಗೆ ತಿಳಿಸುತ್ತಾ, ರಂಗಭೂಮಿಯ ಪ್ರಸ್ತುತಿಯನ್ನು ಅನುಭವಿಸುವಂತೆ ವಿದ್ಯಾರ್ಥಿಗಳಿಗೆ ಕರೆಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಕಲೆ ಎಂಬುದು ದೇವರ ಪ್ರಸಾದ ಅದನ್ನು ಬೆಳೆಸಿ ಪೋಷಿಸುವುದೇ ನಾವು ದೇವರಿಗೆ ಅರ್ಪಿಸುವ ನಿಜವಾದ ಪೂಜೆ ಎಂದು ತಿಳಿಸಿ, ವಿದ್ಯಾರ್ಥಿಗಳು ವಿವಿಧ ಕಲಾಪ್ರಕಾರಗಳಲ್ಲಿ ಕ್ರಿಯಾತ್ಮಕವಾಗಿ, ಸೃಜನಾತ್ಮಕವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.

ಯಕ್ಷಕಲಾ ಕೇಂದ್ರದ ಸಂಯೋಜಕರು ಮತ್ತು ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಶಾಂತ್ ರೈ ಅವರು ಪ್ರಾಸ್ತಾವಿಕವಾಗಿ ನುಡಿಗಳೊಂದಿಗೆ ಸ್ವಾಗತಿಸಿದರು. ಶ್ರೀದೇವಿ ತೃತೀಯ ಬಿಎಸ್ಸಿ ನಿರೂಪಿಸಿ, ಲಲಿತಕಲಾ ಸಂಘದ ವಿದ್ಯಾರ್ಥಿಗಳಾದ ಸುರಭಿ ತೃತೀಯ ಬಿಎಸ್ಸಿ ಮತ್ತು ಮಾನಸ ಪ್ರಥಮ ಬಿಎಸ್ಸಿ ಪ್ರಾರ್ಥಿಸಿ, ಯಕ್ಷಾಮೃತದ ಸಂಯೋಜಕಿ  ಸುರಕ್ಷಾ ರೈ ವಂದಿಸಿದರು. ಉಪನ್ಯಾಸಕರಾದ ಡಾ. ಮೈತ್ರಿ ಭಟ್ ಹಾಗೂ ವಿನಿಲ್ ರೋಹನ್ ಡಿ ಸೋಜಾ ಉಪಸ್ಥಿತರಿದ್ದರು.