ಅಬ್ಬನಡ್ಕ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕ್ರತ  ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ರ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಮಂಗಳವಾರ 8ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಬಿರದಲ್ಲಿ ಲಲಿತಾ ಆಚಾರ್ಯ ಮತ್ತು ನಿಯಾ ಶೆಟ್ಟಿ ಅವರು ಯೋಗ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಅಬ್ಬನಡ್ಕ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಸದಸ್ಯರಾದ ಅಬ್ಬನಡ್ಕ ಪದ್ಮಶ್ರೀ ಪೂಜಾರಿ, ಮಂಜುನಾಥ ಆಚಾರ್ಯ, ಕೀರ್ತನ್ ಕುಮಾರ್ ಮೊದಲಾದವರಿದ್ದರು.