ಚೆನ್ನೈನ ರಾಷ್ಟ್ರೀಯ ಹಸಿರು ಪೀಠವು ಉಡುಪಿ ಜಿಲ್ಲೆಯ ಎಲ್ಲೂರಿನಲ್ಲಿರುವ ಅದಾನಿ ಒಡೆತನದ ಯುಪಿಸಿಎಲ್- ಉಡುಪಿ ಪವರ್ ಕಾರ್ಪೊರೇಶನ್ ಲಿಮಿಟೆಡ್‌ಗೆ 52 ಕೋಟಿ, 2 ಲಕ್ಷ, 50 ಸಾವಿರ ರೂಪಾಯಿ ದಂಡ ವಿಧಿಸಿತು.
ಕಂಪೆನಿಯ ಸುತ್ತ ಹತ್ತು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪರಿಸರ ನಾಶ ಮಾಡಿದ್ದಕ್ಕಾಗಿ ಈ ದಂಡ ವಿಧಿಸಲಾಗುತ್ತದೆ. ದಂಡವನ್ನು ಪರಿಹಾರ ರೂಪದಲ್ಲಿ ಪಾವತಿಸುವಂತೆ ಪರಿಸರ ನ್ಯಾಯ ಮಂಡಳಿ ಹೇಳಿದೆ. ಅಲ್ಲದೆ ಕೃಷಿ ಪರಿಸರ ನಾಶ ಅಧ್ಯಯನಕ್ಕೆ ಸಮಿತಿಯೊಂದನ್ನು ರಚಿಸಿದೆ.