ಮಂಗಳೂರು: ಎಐಸಿಸಿ ಸಹಾಯಕ ಪ್ರಾದೇಶಿಕ ಚುನಾವಣಾ ಅಧಿಕಾರಿ ಜಾನ್ಸನ್ ಅಬ್ರಹಾಂ ಅವರು ಮಂಗಳವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಸಾಂಸ್ಥಿಕ ಚುನಾವಣೆ ಕುರಿತು ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಜಾನ್ಸನ್ ಅಬ್ರಹಾಂ ಅವರು ಸಾಂಸ್ಥಿಕ ಚುನಾವಣೆ ಬಗ್ಗೆ ವಿವರಿಸಿ ಕಾರ್ಯಕರ್ತರಿಂದ ಅಭಿಪ್ರಾಯ ಪಡೆದರು. 

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ. ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಮೊಯ್ದೀನ್ ಬಾವ, ಜೆ.ಆರ್.ಲೋಬೋ, ಕೆಪಿಪಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಮಮತಾ ಗಟ್ಟಿ, ಬ್ಲಾಕ್ ಅಧ್ಯಕ್ಷರು ಹಾಗೂ ಮುಖಂಡರು ಉಪಸ್ಥಿತರಿದ್ದರು.