ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏ.27ರಬುಧವಾರ ಮೂಡಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್, ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಎಕ್ಸಲೆಂಟ್ ಸಂಸ್ಥೆ ಸಿಬ್ಬಂದಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.