ಮಂಗಳೂರು (ನವೆಂಬರ್ 20):- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ zomato, Swiggy, Uberets, Amazon ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಯುವಕರಿಗೆ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿ ವರ್ಗದ ಅರ್ಹ ಫಲಾನುಭವಿಗಳು http://www.dbcdc.karnataka.gov.in/ ನಲ್ಲಿ ಅರ್ಜಿ ಡಿಸೆಂಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಭವನ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿ ದೂ.ಸಂಖ್ಯೆ: 0824-2456544 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.