ಮಂಗಳೂರು: ವೃತ್ತಿಯಲ್ಲಿ ವಕೀಲರಾಗಿರುವ ಆಶಿತ್ ಜಿ ಪಿರೇರಾ ಈ ಹಿಂದೆ ಸಂತ ಅಲೋಶಿಯಸ್ ಕಾಲೇಜ್ ನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, NSUI ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಎರಡು ಬಾರಿ, ಗೋವಾ ರಾಜ್ಯದ NSUI ಉಸ್ತುವಾರಿ ಆಗಿ ಹಾಗೂ ದಿಲ್ಲಿ ವಿದ್ಯಾರ್ಥಿ ವಿಶ್ವವಿದ್ಯಾನಿಲಯದ ಚುನಾವಣಾ ಉಸ್ತುವಾರಿ ಆಗಿ ಸೇವೆ ಸಲ್ಲಿಸಿದ್ದಾರೆ.
ಕಂಕನಾಡಿ ವಾರ್ಡ್ ನ ಮಹಾನಗರ ಪಾಲಿಕೆಯ ಅಭ್ಯರ್ಥಿಯಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಮೈಸೂರು ಗ್ರಾಮಾಂತರ ಯುವ ಕಾಂಗ್ರೆಸ್ ಉಸ್ತುವಾರಿ ಆಗಿ ಸೇವೆ ಸಲ್ಲಿಸುತ್ತಾ ಇದ್ದಾರೆ. ಪಕ್ಷದಲ್ಲಿ ಇವರ ಸಕ್ರೀಯ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ ರಾಷ್ಟ್ರೀಯ ಹಾಗೂ ರಾಜ್ಯ ಸಮಿತಿಯು ಇವರನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಪದೋನ್ನತಿ ಮಾಡಿರುತ್ತಾರೆ.
ಇವರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿಕೆಟ್ ಆಕಾಂಕ್ಷಿ ಆಗಿರುತ್ತಾರೆ.