ಬಂಟ್ವಾಳದ ಎಎಸ್ಪಿ ಶಿವಾಂಶು ರಜಪೂತ್ ವರ್ಗಾವಣೆಗೆ ಮರಳು , ಜೂಜಿನಂಥ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಲು ಹೊರಟಿದ್ದೇ ಕಾರಣ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಪಾದಿಸಿದ್ದಾರೆ . ಇದಕ್ಕೆಲ್ಲ ರಾಜಕೀಯ ಪ್ರೇರಣೆಯೇ ಕಾರಣ ಎಂದು ಆರೋಪಿಸಿರುವ ಅವರು , ಬಂಟ್ವಾಳ ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಅಕ್ರಮ ದಂಧೆ ನಡೆಯುತ್ತಿದೆ ಎಂದು ಪುನರುಚ್ಚರಿಸಿದ್ದಾರೆ . ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು . ಆಡಳಿತ ಪಕ್ಷದ ರಾಜಕೀಯ ಪ್ರೇರಣೆ ಇದಕ್ಕೆಲ್ಲ ಕಾರಣ ಎಂದು ಆಡಳಿತ ಪಕ್ಷದ ವಿರುದ್ಧ ಅವರು ಗಂಭೀರ ಆಪಾದನೆ ಮಾಡಿದ್ದಾರೆ.
ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ , ನಿರಂತರವಾಗಿ ಅಕ್ರಮ ಮರಳುಗಾರಿಕೆ ಬಂಟ್ವಾಳ ಕ್ಷೇತ್ರದಲ್ಲಿ ನಡೆಯುತ್ತಿದ್ದು , ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ರೈ ನೆನಪಿಸಿದರು . ಜೂಜು ಅಡ್ಡೆಯ ಬಳಿಯೇ ಹಲ್ಲೆ ಪ್ರಕರಣ , ವರದಿಯಾಗಿವೆ . ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ ಎಂದು ರೈ ಹೇಳಿದರು . ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಬೇಬಿ ಕುಂದರ್ , ಸುದೀಪ್ ಕುಮಾರ್ ಶೆಟ್ಟಿ , ಅಬ್ಬಾಸ್ ಆಲಿ ಬೋಳಂತೂರು , ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು , ಮುರಳೀಧರ ರೈ ಮಠಂತಬೆಟ್ಟು , ಪ್ರಸಾದ್ ಕೌಶಲ್ ಶೆಟ್ಟಿ , ಚಂದ್ರಪ್ರಕಾಶ್ ಶೆಟ್ಟಿ ತುಂಬೆ , ಉಮಾನಾಥ ರೈ , ಮಹಮ್ಮದ್ ಬಡಗನ್ನೂರು , ಪದ್ಮನಾಭ ರೈ ಉಪಸ್ಥಿತರಿದ್ದರು .