ಬೆಳ್ಳಾರೆ ಸಮೀಪದ ಕಳಂಜದಲ್ಲಿ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಹತ್ಯೆಯಾಗಿರುವ ಮಸೂದ್ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ಪರಿಹಾರ ನೀಡುವ ಜೊತೆಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದ.ಕ.ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಸವಾದ್ ಸುಳ್ಯ ಆಗ್ರಹಿಸಿದ್ದಾರೆ.

ಉದ್ದೇಶ ಪೂರ್ವಕವಾಗಿಯೇ ದುಷ್ಕರ್ಮಿಗಳು ಗುರಿಯಾಗಿಸಿಕೊಂಡು ಮಸೂದ್ ಮೇಲೆ ಗುಂಪು ದಾಳಿ ನಡೆಸಿದ್ದಾರೆ. ಬಡ ಕುಟುಂಬಕ್ಕೆ ಮಸೂದ್ ಆಸರೆಯಾಗಿದ್ದ. ಆದರೆ, ಇದೀಗ ಆತನ ಕೊಲೆಯಾಗಿದ್ದು, ಇಂತಹ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಶಿವಮೊಗ್ಗದ ಹರ್ಷ ಕುಟುಂಬಕ್ಕೆ ನೀಡಿದಂತೆ ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು, ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗರಿಷ್ಠ ಮಟ್ಟದ ಶಿಕ್ಷೆಯನ್ನು ವಿಧಿಸಬೇಕು  ಹಾಗೂ ಶಾಂತವಾಗಿದ್ದ ಬೆಳ್ಳಾರೆಯಲ್ಲಿ ಗಲಭೆ ಸೃಷಿಸುವ ಸಂಘಪರಿವಾರದ ಹುನ್ನಾರವನ್ನು ಪೋಲಿಸ್ ಇಲಾಖೆ ಮಟ್ಟ ಹಾಕಬೇಕು ಎಂದು ಸವಾದ್ ಸುಳ್ಯ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.