ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ರಾಜ್ಯ ಹೆದ್ದಾರಿ 70 ರಲ್ಲಿ ಕಾರು ಮತ್ತು ಟಿಪ್ಪರ್ ಡಿಕ್ಕಿ ಹೊಡೆದು ಘಟನೆ ಬುಧವಾರ  ಸಂಜೆ ಹೊತ್ತಿಗೆ ನಡೆದಿದೆ. 

ಕಾರಿನಲ್ಲಿ ಐವರು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡು ಸುರತ್ಕಲ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಕಿನ್ನಿಗೋಳಿ  ಕಡೆಯಿಂದ  ಮೂಡಬಿದ್ರೆ ಕಡೆಗೆ ಹೋಗುತ್ತಿದ್ದ  ಕಾರು ಮೂರುಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ  ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರ ಎನ್ನಲಾಗಿದೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ  ರಾಮಣ್ಣ ಮಾರನಾಡ್ ಬೆಳುವಾಯಿ ನಿವಾಸಿ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಾರಿನಲ್ಲಿದ್ದವರು ಮುಲ್ಕಿ ಕಾರ್ನಾಡ್ ನಲ್ಲಿ ಕೆಲಸಕ್ಕೆ ತೆರಳಿದ್ದು ವಾಪಸ್ಸಾಗುತ್ತಿರುವ ಸಂದರ್ಭದಲ್ಲಿ ಘಟನೆ ನಡೆದಿದೆ.

News by: Sudeep Dsouza Kinnigoli