ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

ಹಲ್ಲೆ, ಕೊಲೆಯತ್ನ, ಅಪಹರಣ, ಹಫ್ತಾ ವಸೂಲಿ, ದರೋಡೆ, ಕೊಲೆ ಸಹಿತ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ತಲ್ಲತ್, ಪ್ರಾಯ(39), ತಂದೆ: ಕೋಯ ತಂಙಳ್, ವಾಸ: ಶಾಂತಿನಗರ ಮನೆ, ಫೈಸಲ್ ನಗರ, ಬಜಾಲ್, ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಈತನು 2004 ನೇ ಇಸವಿಯಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಆರೋಪಿ ಪತ್ತೆ ಕಾರ್ಯವನ್ನು ಮಂಗಳೂರು ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್, ಐ ಪಿ ಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.